ಬಲವಂತವಾಗಿ ವೈದ್ಯೆಯ ಹಿಜಾಬ್ ತೆಗೆದ ಬಿಹಾರ ಸಿಎಂ ನಿತೀಶ್ ಕುಮಾರ್ ಕೃತ್ಯ ಖಂಡನೀಯ: ಲತಾ ರವಿ ರಾಠೋಡ್
Update: 2025-12-17 22:16 IST
ಕಲಬುರಗಿ: ಸಾರ್ವಜನಿಕ ಕಾರ್ಯಕ್ರಮದ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಹಿಳಾ ವೈದ್ಯೆಯ ಹಿಜಾಬ್ ಅನ್ನು ಬಲವಂತವಾಗಿ ತೆಗೆಸಿರುವ ಘಟನೆ ಖಂಡನೀಯ ಎಂದು ಕಲಬುರಗಿ ಮಹಾನಗರ ಪಾಲಿಕೆ ಸದಸ್ಯೆ ಲತಾ ರವಿ ರಾಠೋಡ್ ಹೇಳಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿದ ಅವರು, ಬಲವಂತದಿಂದ ಹಿಜಾಬ್ ತೆಗೆದಿರುವುದು ಖಂಡನಾರ್ಹ. ಈ ಘಟನೆ ಮಹಿಳೆಯರ ಗೌರವ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಹಕ್ಕುಗಳಿಗೆ ಧಕ್ಕೆ ಮಾಡುವುದಾಗಿದೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.
ಈ ಘಟನೆಯ ಕುರಿತು ಸಂಬಂಧಿತ ಅಧಿಕಾರಿಗಳು ತಕ್ಷಣ ಸ್ಪಷ್ಟನೆ ನೀಡಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಸಂವಿಧಾನಾತ್ಮಕ ಮೌಲ್ಯಗಳಾದ ಸಮಾನತೆ, ನ್ಯಾಯ ಮತ್ತು ಮಹಿಳೆಯರ ಗೌರವವನ್ನು ಕಾಪಾಡುವುದು ಸರ್ಕಾರದ ಮತ್ತು ಸಮಾಜದ ಜವಾಬ್ದಾರಿಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.