ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಮಲ್ಲಿಕಾರ್ಜುನ ಖರ್ಗೆ
Update: 2024-10-13 15:24 IST
Photo : PTI
ಕಲಬುರಗಿ, ಅ.13: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿಯವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಖರ್ಗೆ, ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ತನಗೆ ಜೀವ ಬೆದರಿಕೆ ಇರುವುದಾಗಿ ಸಿದ್ದೀಕಿ ಮಹಾರಾಷ್ಟ್ರ ಸರಕಾರದ ಗಮನಕ್ಕೆ ತಂದಿದ್ದರು. ಆದರೂ ಅಲ್ಲಿನ ಸರಕಾರ ನಿರ್ಲಕ್ಷಿಸಿದ್ದರಿಂದ ಈ ಹತ್ಯೆ ನಡೆದಿದೆ ಎಂದು ಆರೋಪಿಸಿದ್ದಾರೆ.