ಕಲಬುರಗಿ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು, ನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯ ಮೂವರಿಗೆ ಪ್ರಮುಖ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಲಭಿಸಿದೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ, ಶ್ಯಾಮ್ ನಾಟೀಕರ್ ಅವರನ್ನು ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ಹಾಗೂ ಚಿಂಚೋಳಿಯ ಸುಭಾಷ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ನೇಮಕಾತಿ ಪಟ್ಟಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಒಪ್ಪಿಗೆ ಸೂಚಿಸಿದ್ದಾರೆ. ಬಳಿಕ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಮೂವರು ಮುಖಂಡರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ದೊರೆತಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ