ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ
Update: 2024-12-10 09:53 IST
ಕಲಬುರಗಿಯ ಎನ್ ಜಿಒ ಕಾಲನಿಯಲ್ಲಿರುವ ಕಲಬುರಗಿ ಮನಪಾ ಉಪ ಆಯುಕ್ತ ಆರ್.ಪಿ.ಜಾಧವ ಮನೆ. (ಒಳಚಿತ್ರದಲ್ಲಿ ಆರ್.ಪಿ. ಜಾಧವ).
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಆರ್.ಪಿ. ಜಾಧವ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇಲ್ಲಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಕೆ. ಉಮೇಶ್ ನೇತೃತ್ವದಲ್ಲಿ ಮೂರು ತಂಡಗಳಲ್ಲಿ ಮೂವತ್ತಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ನಗರದ ಎನ್ಜಿಒ ಕಾಲನಿಯ ಮನೆ, ಫರಹತಾಬಾದ್ ಸಮೀಪವಿರುವ ಉಪ ಆಯುಕ್ತ ಆರ್.ಪಿ. ಜಾಧವ ಅವರ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ಇವರಿಗೆ ಸಂಬಂಧಪಟ್ಟಂತ ಮನೆ ಕಟ್ಟಡ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ.
ಆರ್.ಪಿ. ಜಾಧವ ಕಳೆದ ಕೆಲವು ವರ್ಷಗಳಿಂದ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಉಪ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.