ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಕಲಬುರಗಿ ಜಿಲ್ಲೆಗೆ ಅನ್ಯಾಯ: ಮಾಲಾ ಕಣ್ಣಿ ಆರೋಪ
Update: 2025-10-31 22:39 IST
ಕಲಬುರಗಿ : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಕಲಬುರಗಿ ಜಿಲ್ಲೆಗೆ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಪೂರ್ಣವಾಗಿ ಅನ್ಯಾಯ ಮಾಡಲಾಗಿದೆ ಎಂದು ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥೆ ಮಾಲಾ ಕಣ್ಣಿ ಆರೋಪಿಸಿದ್ದಾರೆ.
ಕಂದಾಯ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಗೆ ಕನಿಷ್ಠ 3 ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಬೇಕಾಗಿತ್ತು. ಆದರೆ, ಸರಕಾರ ಕಲಬುರಗಿ ಜಿಲ್ಲೆಗೆ ಕೇವಲ ಒಂದು ಪ್ರಶಸ್ತಿ ಕೊಟ್ಟು ಮಲತಾಯಿ ಧೋರಣೆ ತೋರಿದೆ ಎಂದು ಅವರು ಖಂಡಿಸಿದ್ದಾರೆ.
ರಾಜ್ಯ ಸರಕಾರ ಮಹಾಪುರುಷರ ಪ್ರತಿ ಜಯಂತಿಗೆ ಮೀಸಲಾಗಿರುವ 50,000 ರೂ. ಹಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಸ್ಥರು ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ