×
Ad

ಬೆಲೆ ಏರಿಕೆ ಮಾಡುತ್ತಿರುವ ಮೋದಿ ಸರ್ಕಾರಕ್ಕೆ ಜನರ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Update: 2026-06-01 19:31 IST

ಕಲಬುರಗಿ: ಪದೇ ಪದೇ ಪೆಟ್ರೋಲ್, ಡೀಸೆಲ್ ಮತ್ತಿತ್ತರ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರಕಾರಕ್ಕೆ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾಸ್, ಪೆಟ್ರೋಲ್ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಳದಿಂದ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಬಿಜೆಪಿ ಸರಕಾರ ಕೇವಲ ಮಾತಿನಿಂದ ಮರಳು ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರಕ್ಕೆ ದೇಶ ಮತ್ತು ಜನರ ಬಗ್ಗೆ ನಿಜವಾದ ಕಾಳಜಿ ಇಲ್ಲದಂತಾಗಿದೆ. ಸರ್ಕಾರ ಕ್ರಮೇಣ ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದು, ಪ್ರತಿಯೊಂದು ವಿಷಯದಲ್ಲೂ ವಿರೋಧ ಪಕ್ಷಗಳನ್ನು ದೂಷಿಸುವುದನ್ನೇ ತನ್ನ ಕೆಲಸವಾಗಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ವಿರೋಧ ಪಕ್ಷಗಳು ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಸರಿಯಲ್ಲ. ವಿರೋಧ ಪಕ್ಷಗಳು ಸದಾ ದೇಶದ ಹಿತಾಸಕ್ತಿ ಮತ್ತು ಜನರ ಕಲ್ಯಾಣದ ಪರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದ ಅವರು, ಕೇಂದ್ರ ಸರ್ಕಾರ ಘೋಷಿಸುವ ಅನೇಕ ಕಾರ್ಯಕ್ರಮಗಳು ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಹಾಗೂ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಗಳಾಗಿವೆ. ಹಿಂದಿನ ಸರ್ಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಹಲವು ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News