ಮೇ14 ರಂದು ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯೋತ್ಸವ : ಸಂಜೀವಕುಮಾರ ಶೆಟ್ಟಿ
ಕಲಬುರಗಿ : ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ ರವರ ಜಯಂತ್ಯೋತ್ಸವನ್ನು ಮೇ14 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೆ.ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9ಗಂಟೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ, ಸಂಜೆ 4 ಗಂಟೆಗೆ ಮಹಾಪುರುಷರ ಜೀವನ ಸಾಧನೆ ಮತ್ತು ಚಿಂತನೆಗಳ ಕುರಿತು ಸಂಗೀತ ಗಾಯನ ಕಾರ್ಯಕ್ರಮ ಹಾಗೂ ಸಂಜೆ 6 ಗಂಟೆಗೆ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇದೇ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಥಾರ ನೀಡಿ ಗೌರವಿಸಲಾಗುವುದು ಎಂದರು.
ಜ್ಞಾನಪ್ರಕಾಶ ಸ್ವಾಮೀಜಿ, ಡಾ.ಸಿದ್ದರಾಮ ಬೆಲ್ದಾಳ ಶರಣರು, ಕೋರಣೇಶ್ವರ ಸ್ವಾಮೀಜಿ, ಡಾ.ದಾಕ್ಷಾಯಿಣಿ ಶರಣಬಸವಪ್ಪ ಅಪ್ಪ ದಿವ್ಯ ಸಾನಿಧ್ಯ ವಹಿಸುವರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ರಾಧಾಕೃಷ್ಣ ದೊಡ್ಡಮನಿ ಜ್ಯೋತಿ ಬೆಳಗಿಸುವರು. ಕೆ.ಹೆಚ್.ಬಿ.ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಶಾಸಕಿ ಖನೀಜ ಫಾತಿಮಾ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಶಾಸಕ ಬಸವರಾಜ ಮತ್ತಿಮೂಡ, ಮಹಾಪೌರ ಯಲ್ಲಪ್ಪ ನಾಯ್ಕೋಡಿ, ನಗರ ಪೊಲೀಸ್ ಆಯುಕ್ತ ಡಾ.ಶರಣಬಸಪ್ಪ ಢಗೆ, ಬಿಜೆಪಿ ಜಿಲ್ಲಾನಗರಧ್ಯಕ್ಷ ಚಂದ್ರಕಾoತ ಪಾಟೀಲ್, ಶರಣಕುಮಾರ ಮೋದಿ ಸೇರಿದಂತೆ ಅನೇಕರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಸುದ್ದಿಗೋಷ್ಠಿಯಲ್ಲಿ ದಶವಂತ ಬಿ. ಕಣಮಸ್ಕರ್, ಮಲ್ಲಿಕಾರ್ಜುನ ಶಿವಪ್ಪ ಹುಲೇಕರ್, ಬಾಲಕೃಷ್ಣ ಕುಲಕರ್ಣಿ, ಸಂಗಮೇಶ ಸರಡಗಿ, ಅನೀತಾ ಬಕರ, ಹಣಮಂತರಾಯ ಅಟ್ಟೂರ ಸೇರಿದಂತೆ ಇತರರು ಇದ್ದರು.