×
Ad

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ಪ್ರಶಸ್ತಿ ಲಭಿಸಿದ್ದು ಹೆಮ್ಮೆಯ ಸಂಗತಿ: ಸಚಿವ ಪ್ರಿಯಾಂಕ್ ಖರ್ಗೆ

Update: 2026-01-11 17:14 IST

ಕಲಬುರಗಿ: ಸಾರ್ವಜನಿಕರ ಸೇವೆ, ನಾಗರಿಕ ಸ್ನೇಹಿ ವೃತ್ತಿಪರತೆ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪೊಲೀಸ್ ಕಮೀಷನರೇಟ್ ಅಮೂಲಾಗ್ರ ಸುಧಾರಣೆ ತಂದಿದೆ. ಈ ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO  ಪ್ರಶಸ್ತಿ ಲಭಿಸಿದೆ. ಇದು ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಪ್ರತಿಯೊಬ್ಬ ಸಿಬ್ಬಂದಿ ಕಾರಣರಾಗಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.  

ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ರವಿವಾರ ಬೆಳಗ್ಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಈಗ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸಿಕ್ಕಿದೆ. ಆದರೆ ಪೊಲೀಸರು ಜನಸ್ನೇಹಿ ಆದಾಗ ಮಾತ್ರ ಜನರ ಸರ್ಟಿಫಿಕೇಟ್ ಸಿಗಲಿದೆ. ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಪೊಲೀಸರಿಗೆ ಸಲಹೆ ನೀಡಿದರು.

ಅಪರಾಧಗಳಲ್ಲಿ ಸಾಕಷ್ಟು ಇಳಿಮುಖವಾಗಿದೆ. ಎಸ್ಸಿಎಸ್ಟಿ ಸಂಬಂಧಿಸಿದ ಪ್ರಕರಣಗಳು ಇಳಿಮುಖವಾಗಿದೆ. ಚೈನ್ ಕಳ್ಳತನ ಕಡಿಮೆಯಾಗಿವೆ.  ಪೊಲೀಸ್ ಕಮಿಷನರೇಟ್ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿರುವುದು ಅತ್ಯಂತ ಖಷಿಯ ವಿಚಾರವಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಕಲಬುರಗಿ ಪೊಲೀಸ್ ಕಮೀಷನರೇಟ್ ಸಾರ್ವಜನಿಕ ಸೇವೆ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.  

ಪ್ರಾಸ್ತಾವಿಕವಾಗಿ ಮಾತನಾಡಿದ ಪೊಲೀಸ್ ಕಮೀಷನರ್ ಡಾ.ಶರಣಪ್ಪ, ಸಾರ್ವಜನಿಕ ಸೇವೆಗಳಲ್ಲಿ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದ ಹಿನ್ನೆಲೆಯಲ್ಲಿ ಐಎಸ್‌ಓ 2021 ಪ್ರಶಸ್ತಿಯನ್ನು ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ನೀಡಲಾಗಿದೆ. ಸಾರ್ವಜನಿಕರ ಫೈಲ್ ಗಳು‌ ತ್ವರಿತವಾಗಿ ವಿಲೇವಾರಿಯಾಗುತ್ತಿವೆ. ಸಿಬ್ಬಂದಿಗಳ ರಜೆ,‌ ವೈದ್ಯಕೀಯ ಸೇವೆ, ವಿವಿಧ ವಿಭಾಗಗಳಲ್ಲಿ ಗಣನೀಯ ಬದಲಾವಣೆಯಾಗಿವೆ. ಕಮೀಷನರೇಟ್ ಅಡಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಗಣನೀಯ ಸುಧಾರಣೆ ಹಾಗೂ. ಸಾರ್ವಜನಿಕ ಸೇವೆ ಮುಖ್ಯವಾಗಿ ಪಾಸ್ ಪೋರ್ಸ್ ವೆರಿಫಿಕೇಷನ್ ನಲ್ಲಿ ಸುಧಾರಣೆ ತರಲಾಗಿದೆ. ಒಂದು ವಾರದ ಒಳಗಾಗಿ ವಿಲೇವಾರಿ ಮಾಡಲು‌ ಕ್ರಮವಹಿಸಲಾಗಿದೆ" ಎಂದು ವಿವರಿಸಿದರು.

ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ‌ಎಲ್ ಸಿ ತಿಪ್ಪಣ್ಣಪ್ಪ‌ ಕಮಕನೂರು, ಜಗದೇವ ಗುತ್ತೇದಾರ್, ಕುಡಾ ಅಧ್ಯಕ್ಷ ಮಜರ್ ಅಲಂ‌ಖಾನ್, ಜೆಸ್ಕಾಂ‌ ಅಧ್ಯಕ್ಷ ಪ್ರವೀಣ್ ಹರವಾಳ್, ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್, ಕಮಿಷನರ್ ಡಾ.ಶರಣಪ್ಪ ಢಗೆ, ಸಿಇಓ ಭಂವರ್ ಸಿಂಗ್ ಮೀನಾ, ಎಸ್ ಪಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News