×
Ad

ಕಲಬುರಗಿ ನಗರಕ್ಕೆ ಕುಡಿಯುವ ನೀರು ಯೋಜನೆ ವಿಳಂಬ ಮಾಡಿದ ಎಲ್ ಅಂಡ್ ಟಿ ಕಂಪನಿ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ

Update: 2025-05-25 10:00 IST

ಕಲಬುರಗಿ : ಕಲಬುರಗಿ ನಗರಕ್ಕೆ ( 24/7) ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ಯೋಜನೆ ಕಲಬುರಗಿ ‌ನಗರದ ನಾಗರಿಕರಿಗೆ ಪ್ರಮುಖವಾಗಿದ್ದು, ಪ್ರಸ್ತುತ ನಡೆಯುತ್ತಿರುವ ಕಾಮಗಾರಿ ಸಂತೃಪ್ತಿ ತಂದಿಲ್ಲ ಎಂದು ಸಚಿವರು ಅಧಿಕಾರಿಗಳ ತಂಡಕ್ಕೆ ತಿಳಿಸಿದರು.

ಯೋಜನೆಯ ಪ್ರಗತಿ ಪರಿಶೀಲಿಸಿ ತಂಡದ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಪರಿಶೀಲಿಸಿದ ನಂತರ ಸಚಿವರು ಯೋಜನೆ ಪೂರ್ಣಗೊಳಿಸಲು ಸಮಯ ನಿಗದಿಪಡಿಸುವುದರ ಜೊತೆಗೆ ಕಂಪನಿಗೆ ಕೆಲ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಯೋಜನೆ ವಿಳಂಬ ಕುರಿತಂತೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಎಲ್ ಅಂಡ್ ಟಿ ಕಂಪನಿಗೆ ನಿಗದಿಪಡಿಸಿದ ಪರಿಷ್ಕೃತ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಬೇಕು. ಒಂದು ವೇಳೆ ವಿಫಲವಾದರೆ ಗುತ್ತಿಗೆಯನ್ನು ರದ್ದುಗೊಳಿಸಿ ಬೇರೆ ಏಜೆನ್ಸಿಗೆ ಕೊಡಲಾಗುವುದು. ಕಾಲಮಿತಿಯೊಳಗೆ ಮುಗಿಸುವ ಉದ್ದೇಶದ ಸಾರ್ವಜನಿಕರ ಅತ್ಯಗತ್ಯ ಸೇವೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ. ಕಲಬುರಗಿಯ ಜನರು ಇದಕ್ಕೆ ಅರ್ಹರಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News