ಶರಣಬಸವಪ್ಪ ಅಪ್ಪಾಜಿರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಚಿವ ಪ್ರಿಯಾಂಕ್ ಖರ್ಗೆ
Update: 2025-07-29 21:19 IST
ಕಲಬುರಗಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಖಾಯಿಲೆಯಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾ ಅವರನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಲ್ಲಮಪ್ರಭು ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.