×
Ad

ಕಲಬುರಗಿ: ಎಚ್ ಕೆಇ ಸಂಸ್ಥೆಗೆ ಭೇಟಿ ನೀಡಿದ ಸಂಸದ ಡಾ.ಸಿ.ಎನ್ ಮಂಜುನಾಥ್

Update: 2024-12-28 20:24 IST

ಕಲಬುರಗಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರು ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ.ಸಿ.ಎನ್ ಮಂಜುನಾಥ್ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಇಲ್ಲಿಯ ಕಾರ್ಯವೈಖರಿ ವೀಕ್ಷಿಸಿದರು. ನಂತರ ಸಂಸ್ಥೆಯ ಇತ್ತೀಚಿನ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ , ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News