ಅಫಜಲಪುರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಕಲಬುರಗಿ: ಅಫಜಲಪುರ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರೊ.ಬಿ.ಎ.ಪಾಟೀಲ್ ಅವರು, ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಪ್ರತಿವರ್ಷ ಧನ್ವಂತರಿ ಜಯಂತಿಯ ಅಂಗವಾಗಿ ಆಚರಿಸಲಾಗುತ್ತದೆ. ಈ ವರ್ಷದ ಘೋಷವಾಕ್ಯ ‘ಜನತೆಗೆ ಹಾಗೂ ಗೃಹಕ್ಕೆ ಆಯುರ್ವೇದ’ ಎಂಬುದಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ಯಶಸ್ಸು ಸಾಧಿಸಲು ಬೇಕಾದ ಹಲವು ಸಕ್ಸೆಸ್ ಮಂತ್ರಗಳನ್ನು ವಿವರಿಸಿದರು.
ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎಂ.ಎಸ್. ಪ್ರಭುದೇವ ಅವರು, ಆಯುರ್ವೇದ ವಿಜ್ಞಾನ ಮತ್ತು ದಿನಾಚರಣೆಯ ಮಹತ್ವವನ್ನು ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಕುಲಸಚಿವ ಶಿವಶರಣಪ್ಪ ಗೌರ್ ಮತ್ತು ಸುರೇಶ ಶೆಟಗಾರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಕಾಶ್ ರಥೋಡ್ ನಿರೂಪಣೆ ಮಾಡಿದರು. ಸುರೇಶ ಶೆಟಗಾರ್ ಸ್ವಾಗತ ಕೋರಿದರು. ಉಪನ್ಯಾಸಕಿ ನೀಲಾಂಬಿಕ ವಂದನಾರ್ಪಣೆ ಮಾಡಿದರು.