×
Ad

ಜೂ.26 ರಿಂದ ಎರಡು ದಿನ ರಾಷ್ಟ್ರಮಟ್ಟದ ವಿಚಾರ ಸಂಕಿರಣ: ಪ್ರೊ.ಚಂದ್ರಕಾಂತ್ ಯಾತನೂರ್

Update: 2025-06-25 14:00 IST

ಕಲಬುರಗಿ: 'ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಂಪರೆ: 21 ನೇ ಶತಮಾನದ ಸವಾಲುಗಳು' ಎಂಬ ವಿಷಯ ಮೇಲೆ ಗುಲ್ಬರ್ಗ ವಿವಿಯ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜೂ.26ರಿಂದ ಎರಡು ದಿನಗಳ ಕಾಲ ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಚಂದ್ರಕಾಂತ್ ಯಾತನೂರ್ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕ‌ರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆ‌ರ್. ಅಂಬೇಡ್ಕ‌ರ್ ಫೌಂಡೇಷನ್ ಆಶ್ರಯದಲ್ಲಿ ನಡೆಯಲಿರುವ ಈ ವಿಚಾರ ಸಂಕಿರಣವನ್ನು ಜೂನ್ 26ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ. ಈ ವೇಳೆ ದೆಹಲಿಯ ಜವಾಹರಲಾಲ್ ನೆಹರೂ ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ನರೇಂದ್ರಕುಮಾರ ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕುಲಪತಿ ಪ್ರೊ.ಗೂರು ಶ್ರೀರಾಮುಲು ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಹಲವರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ 10ಕ್ಕೂ ಅಧಿಕ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. 40ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳು ವಿಷಯ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಜೂ.27ರಂದು ಮಧ್ಯಾಹ್ನ 3ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಪ್ರೊ. ಎಸ್.ಆ‌ರ್.ನಿರಂಜನ್ ಸಮಾರೋಪ ಭಾಷಣ ಮಾಡುವರು. ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಅವರೊಂದಿಗೆ ಮತ್ತಿತರ ವಿಶೇಷ ಆಹ್ವಾನಿತರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News