×
Ad

ರಾಷ್ಟ್ರೀಯ ಮತದಾರರ ದಿನಾಚರಣೆ: ಕಲಬುರಗಿಯಲ್ಲಿ ಮತದಾರ ಜಾಗೃತಿಗಾಗಿ ಸೈಕಲ್ ಜಾಥಾ

Update: 2026-01-25 20:22 IST

ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ನಗರದ ಜಗತ್ ವೃತ್ತದಲ್ಲಿ ಚಾಲನೆ ನೀಡಿದರು. ಸ್ವತಃ ಸೈಕಲ್ ತುಳಿಯುವ ಮೂಲಕ ಯುವಕರಿಗೆ ಮತದಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು.

ಜಗತ್ ವೃತ್ತದಿಂದ ಆರಂಭಗೊಂಡ ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಸಾಗಿತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕೂಡ ಸೈಕಲ್ ತುಳಿದು ಜಾಥಾದಲ್ಲಿ ಭಾಗವಹಿಸಿ ಮತದಾರರ ಜಾಗೃತಿಗೆ ಬೆಂಬಲ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ತಹಶೀಲ್ದಾರ್ ಆನಂದಶೀಲ, ತಾಲೂಕು ಪಂಚಾಯತ್ ಇ.ಒಗಳಾದ ಸೈಯದ್ ಪಟೇಲ್, ಮಾನಪ್ಪ ಕಟ್ಟಿಮನಿ, ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ ಪುಣೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಯುವಕರು ಹಾಗೂ ಸೈಕ್ಲಿಸ್ಟ್‌ಗಳು ಉತ್ಸಾಹದಿಂದ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News