ಕಲಬುರಗಿ | ಅಂಬೇಡ್ಕರ್ ಜಯಂತ್ಯೋತ್ಸವ ಮೆರವಣಿಗೆ ವೇಳೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Update: 2024-04-14 23:25 IST
ಕಲಬುರಗಿ : ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಮೆರವಣಿಗೆ ವೇಳೆ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ಕಲಬುರಗಿ ನಗರದ ಜೇವರ್ಗಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಶೋಕ್ ನಗರ ಬಡಾವಣೆಯ ನಿವಾಸಿ ಆಕಾಶ್ (19) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಅಶೋಕ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.