×
Ad

ಕಲಬುರಗಿ: ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಶಶಿಕಿರಣ ಆಯ್ಕೆ

Update: 2025-06-05 15:28 IST

ಕಲಬುರಗಿ: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಶಶಿಕಿರಣ ಹಂಚಿನಾಳರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ರವಿ ಡೋಳೆ ಆದೇಶ ಹೊರಡಿಸಿದ್ದಾರೆ.

ಕಲಬುರಗಿಯಲ್ಲಿನ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಶಶಿಕಿರಣ ಹಂಚಿನಾಳ, ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆ ಬಲಪಡಿಸಬೇಕು, ಜಿಲ್ಲೆಯ ಸರಕಾರಿ ನೌಕರರ ಹಿತ ಕಾಯಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶಕುಮಾರ ಹೆಬ್ಬಾಳೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News