×
Ad

ಕಲ್ಯಾಣ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಶ್ವೇತಪತ್ರ ಹೊರಡಿಸಿ: ಸುಧಾ ಹಾಲ್ಕಾಯಿ ಒತ್ತಾಯ

Update: 2025-06-16 13:52 IST

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ನೀಡುತ್ತಿರುವುದಾಗಿ ರಾಜ್ಯ ಸರಕಾರ ಹೇಳಿಕೊಳ್ಳುತ್ತಿದೆ, ಇದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಬಿಜೆಪಿ ವಕ್ತಾರೆ ಡಾ. ಸುಧಾ ಹಾಲ್ಕಾಯಿ ಆಗ್ರಹಿಸಿದ್ದಾರೆ.

ನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾದಗಿರಿಯಲ್ಲಿ ಮಾತನಾಡುತ್ತಾ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ನಮ್ಮ ಸರಕಾರ ಬಂದಾಗಿನಿಂದ ಕಲ್ಯಾಣ ಕರ್ನಾಟಕಕ್ಕೆ 13 ಸಾವಿರ ಕೋಟಿ ರೂಪಾಯಿಗಳನ್ನು ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಅವರು ಅಷ್ಟೊಂದು ಅನುದಾನ ಕೊಟ್ಟಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ, ಒಂದು ವೇಳೆ ಅಷ್ಟೊಂದು ಹಣ ಕೊಟ್ಟಿದ್ದರೆ ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಡಾ.ನಂಜುಂಡಪ್ಪ ವರದಿ ಉಲ್ಲೇಖಿಸಿ ಸರಕಾರ ಅಭಿವೃದ್ಧಿ ಕೆಲಸ ಮತ್ತು ಅನುದಾನ ನೀಡಲಿ, ಅದನ್ನು ಬಿಟ್ಟು ಈಗ ಗೋವಿಂದ್ ರಾವ್ ಸಮಿತಿ ತಂದು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದರು.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಕೊನೆಯ ಸ್ಥಾನದಲ್ಲಿವೆ. ಶಿಕ್ಷಣ ಆವಿಷ್ಕಾರ ಮತ್ತಿತರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ನಿಗದಿತ ಪ್ರಗತಿ ಕಂಡಿಲ್ಲ. ಖಾಲಿ ಇರುವ ಸಾವಿರಾರು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ, ಕಲಬುರಗಿ ಒಂದೇ ಜಿಲ್ಲೆಯಲ್ಲೇ 1 ಸಾವಿರಕ್ಕೂ ಹೆಚ್ಚು ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ. ಅದರ ಬಗ್ಗೆ ರಾಜ್ಯ ಸರಕಾರ ಹೆಚ್ಚು ಗಮನ ಹರಿಸಲಿ ಎಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಪ್ನಾ ಮಂಗಲಗಿ, ಗಿರಿರಾಜ್ ಯಳಮೇಲಿ, ಅನೀಲ್ ಸಿನ್ನೂರಕರ್, ಹರ್ಷಾ ದೇಶಪಾಂಡೆ ಸೇರಿದಂತೆ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News