×
Ad

ಕಲಬುರಗಿ | 'ಮಧುರಚೆನ್ನ ಪ್ರಶಸ್ತಿ'ಗೆ ವಿಜಯಕುಮಾರ್ ತೇಗಲತಿಪ್ಪಿ ಆಯ್ಕೆ

Update: 2025-06-19 10:13 IST

ಕಲಬುರಗಿ: ಕಳೆದ ಎರಡೂವರೆ ದಶಕಗಳಿಂದಲೂ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು 'ಮಧುರಚೆನ್ನ' ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಜಾನಪದ ಪರಿಷತ್, ರಾಜ್ಯ ಘಟಕವು ಜೂ.25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಪ್ರಥಮ ಜಾನಪದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ತೇಗಲತಿಪ್ಪಿ ಯವರ ಸಾಂಸ್ಕೃತಿಕ ಮತ್ತು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇಪ್ಪತ್ತೆöದು ವರ್ಷಗಳಿಂದ ಸಾಹಿತ್ಯ, ಸಮಾಜ ಸೇವೆ ಮೌಢ್ಯ ನಿರ್ಮೂಲನೆಯ ಕುರಿತಾಗಿ ಹಲವಾರು ವೈಚಾರಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News