×
Ad

ನಾಳೆ‌ ಗಡಿ ಪ್ರದೇಶಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರೊಂದಿಗೆ ಸಂವಾದ : ವಿಜಯಕುಮಾರ ತೇಗಲತಿಪ್ಪಿ

Update: 2025-07-19 14:41 IST

ಕಲಬುರಗಿ: ಜಿಲ್ಲೆಯ ಗಡಿ ಭಾಗದಲ್ಲಿ ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಗಳ ಜಂಟಿ ಆಶ್ರಯದಲ್ಲಿ 20 ರಂದು ಮಧ್ಯಾಹ್ನ 1.15 ಕ್ಕೆ ನಗರದ ಕನ್ನಡ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರೊಂದಿಗೆ ಮುಖಾ ಮುಖಿ ಎಂಬ ಕಾರ್ಯಕ್ರಮವೊಂದನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಜಿಲ್ಲೆಯ ಗಡಿ ಪ್ರದೇಶಗಳಾದ ಚಿಂಚೋಳಿ, ಆಳಂದ, ಅಫಜಲಪುರ, ಸೇಡಮ್ ತಾಲೂಕುಗಳಲ್ಲಿಂದು ಹತ್ತು ಹಲವು ಸಮಸ್ಯೆಗಳು ಎದುರಾಗಿವೆ. ನಮ್ಮ ಕನ್ನಡ ಭಾಷೆಯ ಬೆಲವಣಿಗೆ ತೀರ ಕುಂಠಿತಗೊಳ್ಳುತ್ತಿದೆ. ಗಡಿ ಹಳ್ಳಿಗಳಿಗೆ ಮಾತೃ ಭಾಷೆ ಬೋಧಿಸುವ ಶಿಕ್ಷಕರ ಕೊರತೆ ಪ್ರಮುಖವಾಗಿ ಎದ್ದು ಕಾಣುತ್ತಿದೆ. ಇಂಥ ಹಲವು ಸಮಸ್ಯೆಗಳ ಮೇಕಲೆ ಬೆಳಕು ಚೆಲ್ಲುವ ಪ್ರಾಮಾಣಿಕ ಪ್ರಯತ್ನ ಈ ಕಾರ್ಯಕ್ರಮದ್ದಾಗಿದೆ ಎಂದು ಅವರು ವಿವರಿಸಿದರು.

ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ಸೇರಿದಂತೆ ಅನೇಕ ಗಣ್ಯರು ವೇದಿಕೆ ಮೇಲೆ ಉಪಸ್ಥಿತರಿರುವರು. ಗಡಿ ಕನ್ನಡಿಗರಿಗೆ ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News