×
Ad

ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಪಥ ಸಂಚಲನ: ಕಲಬುರಗಿಯ ಶರಣಬಸವೇಶ್ವರ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ನಿಶಾ ಆಯ್ಕೆ

Update: 2025-01-23 22:44 IST

ಕಲಬುರಗಿ: ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ.ಅoತಿಮ ವರ್ಷದ ಎನ್.ಎಸ್.ಎಸ್ ವಿದ್ಯಾರ್ಥಿನಿ ನಿಶಾ ರಾಠೋಡ ಅವರು ಬೆಂಗಳೂರಿನಲ್ಲಿ ನಡೆಯುವ ಜ.26ರ ಗಣರಾಜ್ಯೋತ್ಸವದ ಕಾರ್ಯಕ್ರಮದ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಇವರ ಈ ಆಯ್ಕೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಚೇರಪರ್ಸನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ, ಪೂಜ್ಯ ಚಿ.ದೊಡ್ಡಪ್ಪ ಅಪ್ಪ, ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಶರಥ ಮೇತ್ರೆ, ಎನ್.ಎಸ್.ಎಸ್ ಅಧಿಕಾರಿ ಪ್ರೊ.ದಯಾನಂದ ಹೊಡಲ್, ನ್ಯಾಕ್ ಸಂಯೋಜಕ ಡಾ.ಸುನಂದಾ ವಾಂಜರಖೇಡೆ, ಎಲ್ಲಾ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News