ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ 15 ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನಾ ಕಾರ್ಯ ಬುಧವಾರ ನಡೆಯಿತು. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹೀರಾ ನಸೀಮ್ ತಿಳಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ತಂದೆ ಹಣಮಂತಪ್ಪ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ ತಂದೆ ಗಂಗಾಧರ ನಮೋಶಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಯಬಣ್ಣ ತಂದೆ ನಾಗೀಂದ್ರ ಹಾಗೂ ಜನತಾ ದಳ (ಸಂಯುಕ್ತ) ಪಕ್ಷದ ಅಭ್ಯರ್ಥಿ ಶಂಕರೆಡ್ಡಿ ಪಾಟೀಲ ತಂದೆ ಲಿಂಗನಗೌಡ ಪಾಟೀಲ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.

ಅದೇ ರೀತಿ ಪಕ್ಷೇತರ ಅಭ್ಯರ್ಥಿಗಳಾದ ಕವಿರಾಜ ತಂದೆ ನಾಗಣ್ಣ, ತುಳಸಪ್ಪ ದಾಸರ ತಂದೆ ಕರಿಯಪ್ಪ ದಾಸರ, ನಬಿರಸೂಲ್ ತಂದೆ ದಸ್ತಗೀರಸಾಬ್ ಜಕಾತಿ, ಮಹಬೂಬ್ ತಂದೆ ಮೊಹಮ್ಮದ್ ಖಾಜಾ ಹುಸೇನ್ ವಂಟೇಲಿ, ರಾಜಕುಮಾರ ತಂದೆ ಮಾಣಿಕಪ್ಪ, ರಾಜು ತಂದೆ ದೇವಪ್ಪ, ಶರಣಬಸಪ್ಪ ತಂದೆ ಪೀರಪ್ಪ, ಶಶಿಧರ ತಂದೆ ಬಸವರಾಜ, ಶಿವಶಂಕರ ತಂದೆ ಅಣ್ಣಪ್ಪ ಹಾಗೂ ಡಾ. ಸುರೇಶ ತಂದೆ ದಾವೀದಪ್ಪ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನಸೀರುದ್ದಿನ್ ತಂದೆ ಖಾಜಾ ಮೊಯಿನುದ್ದಿನ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದ್ದು, ಅಂದೇ ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗಲಿದೆ.

ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ. ಅವರ ಉಪಸ್ಥಿತಿಯಲ್ಲಿ ನಡೆದ ನಾಮಪತ್ರ ಪರಿಶೀಲನಾ ಕಾರ್ಯದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor