ಆಳಂದ: ನವರಾತ್ರಿ ದಸರಾ ಮಹೋತ್ಸವದ ಅಂಗವಾಗಿ ಪಟ್ಟಣದಲ್ಲಿ ಭಾವಸಾರ್ ಕ್ಷತ್ರಿಯ ಸಮಾಜದ ಆರಾಧ್ಯ ದೇವತೆ ಶ್ರೀ ಹಿಂಗುಲಾಂಬಿಕಾ ದೇವಿಯ ಪಲ್ಲಕ್ಕಿ ಉತ್ಸವ ಭಕ್ತಿ ಮತ್ತು ಶ್ರದ್ಧೆಯಿಂದ ಜರುಗಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತರು ದೇವಿಯ ಮೂರ್ತಿ ಹಾಗೂ ಪಾದುಕೆಗಳಿಗೆ ಪೂಜೆ ಸಲ್ಲಿಸಿ, ಹೂವಿನ ಹಾರಗಳನ್ನು ಸಮರ್ಪಿಸಿದರು. ಉತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ನಾರಾಯಣ ಪತಂಗೆ, ಉಪಾಧ್ಯಕ್ಷ ನಂದಕಿಶೋರ್ ಹಂಚಾಟೆ, ಮಹಿಳಾ ಮಂಡಲದ ಅಧ್ಯಕ್ಷೆ ವಿದ್ಯಾವತಿ ಕಾಲೆಕರ, ತರುಣ್ ಮಂಡಳದ ಅಧ್ಯಕ್ಷ ಅಮೃತ್ ಬುಲಬುಲೆ ಸೇರಿದಂತೆ ಸಮಾಜದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor