×
Ad

ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ಒಪ್ಪಂದ ಕಾಣದೆ ಶಾಂತಿ ಸಭೆ ಮುಕ್ತಾಯ

Update: 2025-10-28 14:12 IST

ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅವಕಾಶ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈ ಕೋರ್ಟ್ ನಿರ್ದೇಶನದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ಕೊನೆಗೆ ಆರೆಸ್ಸೆಸ್‌ ಪರವಾಗಿ ಮಾತನಾಡಿದ ಬಿಜೆಪಿ ಪಕ್ಷದ ದಲಿತ ಮುಖಂಡ ಮತ್ತು ದಲಿತ ಸಂಘಟನೆಗಳ ನಡುವೆ ವಾಗ್ವಾದ ಮೂಲಕ ಸಭೆ ಮುಕ್ತಾಯಗೊಂಡಿದೆ.

ಬಿಜೆಪಿ ಪಕ್ಷದ ದಲಿತ ಮುಖಂಡ ಅಂಬರಾಯ ಅಸ್ಟಗಿ ಆರೆಸ್ಸೆಸ್ ಪರವಾಗಿ ಮಾತನಾಡುವ ವೇಳೆ ವಾಗ್ವಾದ ಉಂಟಾಗಿದೆ. ಹಾಗಾಗಿ ಸಭೆಯನ್ನು ಮುಕ್ತಾಯಗೊಳಿಸಿ ಎಲ್ಲಾ ಸಂಘನಟನೆಯ ಮುಖಂಡರನ್ನು ಸಭೆಯಿಂದ ಹೊರಗೆ ಕಳುಹಿಸಲಾಯಿತು.

ಶಾಂತಿ ಸಭೆ ನೇತೃತ್ವವ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸೇಡಂ ಸಹಾಯ ಆಯುಕ್ತರು, ಚಿತ್ತಾಪೂರ ತಹಸೀಲ್ದಾರ, ಪುರಸಭೆಯ ಮುಖ್ಯಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್.ಡಿ, ಶಹಾಬಾದ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು, ಚಿತ್ತಾಪೂರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ಎಲ್ಲಾ ಸಂಘಟನೆಗಳಿ 10 ನಿಮಿಷ ಮಾತನಾಡುವ ಅವಕಾಶ ನೀಡಲಾಗಿತ್ತು. ಈ ವೇಳೆ ಆರೆಸ್ಸೆಸ್ ಸಂಘಟಕರು ನ್ಯಾಯಾಲಯ ನೀಡುವ ದಿನಾಂಕಕ್ಕೆ ಪಥಸಂಚಲನ ಮಾಡುವುದಾಗಿ ತಿಳಿಸಿದರು.

ಆರೆಸ್ಸೆಸ್, ಭಾರತೀಯ ದಲಿತ ಪ್ಯಾಂಥರ್ (ರಿ), ಭೀಮ್ ಆರ್ಮಿ, ರಾಜ್ಯ ಯುವ ಘಟಕ, ಗೊಂಡ-ಕುರುಬ ಎಸ್.ಟಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ (ರಿ). ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಜಿಲ್ಲಾ ಘಟಕ, ಬೀದರ್ ನ ಕ್ರಿಶ್ಚನ್ ಹೌಸನ ಸಂಜಯ ಜಾಗೀರದಾರ, ದಲಿತ ಸಂಘರ್ಷ ಸಮಿತಿ ಭೀಮ ಮಾರ್ಗ, ಡಾ. ವಿಠಲ ದೊಡ್ಡಮನಿ, ಸಂತೋಷ ಬಿ ಪಾಳಾ, ಜೈಭೀಮ್ ಸೇನೆ‌ ಪಥಸಂಚಲನಕ್ಕೆ ಅವಕಾಶ ಕೇಳಿದೆ‌.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News