×
Ad

ಜಯದೇವ ಆಸ್ಪತ್ರೆ ಲೋಕಾರ್ಪಣೆಗೆ ಸಿ.ಎಂ ಆಗಮನ ಹಿನ್ನೆಲೆ : ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಪ್ರಿಯಾಂಕ್ ಖರ್ಗೆ

Update: 2024-12-20 22:05 IST

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯಯ್ಯ ಮತ್ತು ರಾಜ್ಯ ಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಡಿ.22 ರಂದು ಕಲಬುರಗಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಜಯದೇವ ಆಸ್ಪತ್ರೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 7 ಜಿಲ್ಲೆಯ ಸಚಿವರು, ಶಾಸಕರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಎಲ್ಲಿಯೂ ಲೋಪವಾಗದಂತೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಿಷ್ಟಚಾರದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ಆಮಂತ್ರಣ ಪತ್ರಿಕೆ ತಲುಪಿಸಬೇಕು. ಸೂಕ್ತ ಪೊಲೀಸ್ ಭದ್ರತೆ ವ್ಯವಸ್ಥೆ ಕಲ್ಪಿಸಬೇಕು. ಸಂಚಾರಿ ವ್ಯವಸ್ಥೆ ನಿರ್ವಹಣೆ, ಸಾರ್ವಜನಿಕರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದ ಅವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಷ್ಠಾಚಾರದಂತೆ ಅಂಬುಲೆನ್ಸ್, ಅಗ್ನಿಶಾಮಕ ವಾಹನ ಕಾರ್ಯಕ್ರಮ ವೇದಿಕೆ ಸ್ಥಳದಲ್ಲಿ ತೈನಾತಿಸಬೇಕು ಎಂದರು.

ಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ ಸಿ.ಇ.ಓ ಭಂವರ್ ಸಿಂಗ್ ಮೀನಾ, ಡಿ.ಸಿ.ಎಫ್ ಸುಮಿತ್ ಪಾಟೀಲ, ಸಹಾಯಕ ಆಯುಕ್ತೆ ಸಾಹಿತ್ಯ, ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತ ಅವಿನಾಶ ಶಿಂಧೆ, ಕೆ.ಕೆ.ಆರ್.ಟಿ.ಸಿ ಎಂ.ಡಿ. ಎಂ.ರಾಚಪ್ಪ, ಕಲಬುರಗಿಯ ಜಯದೇವ ಶಾಖಾ ಆಸ್ಪತ್ರೆಯ ಪ್ರಭಾರಿ ಅಧೀಕ್ಷಕ ಡಾ.ವಿರೇಶ ಪಾಟೀಲ, ಸಮನ್ವಯಾಧಿಕಾರಿ ಸಂತೋಷ್ ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News