×
Ad

ಕಲಬುರಗಿ ಶಾಸಕರೊಂದಿಗೆ ಪ್ರಿಯಾಂಕ್ ಖರ್ಗೆ ಬಜೆಟ್ ಪೂರ್ವ ಸಭೆ

Update: 2026-01-22 22:52 IST

ಕಲಬುರಗಿ,ಜ.22: ಜಿಲ್ಲೆಗೆ ಸಂಬಂಧಿಸಿದಂತೆ ಮುಂಬರುವ ಆಯವ್ಯಯದಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮಹತ್ತರ ಕಾರ್ಯಕ್ರಮಗಳನ್ನು ಸೇರಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ ಜಿಲ್ಲಾ ಶಾಸಕರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು.

ಮೂಲಭೂತ ಸೌಲಭ್ಯಗಳು ಸೇರಿದಂತೆ ಕೆಲವು ಶಾಶ್ವತ ಕಾಮಗಾರಿಗಳನ್ನು ತೆಗೆದುಕೊಳ್ಳಲು ಶಾಸಕರು ಹಲವಾರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾ

ಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಬಿ.ಆರ್.ಪಾಟೀಲ್, ಖನೀಜ್ ಫಾತಿಮಾ, ಚಂದ್ರಶೇಖರ ಪಾಟೀಲ್, ಜಗದೇವ ಗುತ್ತೇದಾರ್, ಸುಭಾಷ್ ರಾಥೋಡ್, ತಿಪ್ಪಣ್ಣಪ್ಪ ಕಮಕನೂರ್ ಸಭೆಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News