×
Ad

ಕಲಬುರಗಿ | ಎನ್.ರವಿಕುಮಾರ್ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2025-05-29 19:22 IST

ಕಲಬುರಗಿ: ವಿಧಾನ ಪರಿಷತ್  ಮುಖ್ಯ ಸಚೇತಕ, ಬಿಜೆಪಿ ನಾಯಕ ಎನ್.ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಗತ್ ವೃತ್ತದವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತೆಯರು, ಎಂಎಲ್‌ಸಿ ರವಿಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ, ಉತ್ತಮ ರೀತಿಯಲ್ಲಿ ಚುನಾವಣೆ ನಿರ್ವಹಣೆ ಮೂಲಕ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದಾರೆ. ಅಂತಹ ಅಧಿಕಾರಿಗಳನ್ನು ಹೀಯಾಳಿಸಿ ಮಾತನಾಡಿದ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಿಜೆಪಿಯವರು ಎಲ್ಲಿ  ಹೋದರೂ ಒಂದು ಸಮುದಾಯದ ವಿರುದ್ಧ ಮಾತನಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ನಾಯಕನೋರ್ವ ಸೇನಾ ಕಮಾಂಡರ್ ಸೋಫಿಯಾ ಖುರೇಶಿ ಬಗ್ಗೆ ಕೇವಲವಾಗಿ ಮಾತನಾಡಿದ್ದ. ಈಗ ನಮ್ಮ ಜಿಲ್ಲಾಧಿಕಾರಿ ವಿರುದ್ಧ ಮತ್ತೋರ್ವ ಬಿಜೆಪಿ ಕೋಮುವಾದಿ ರವಿಕುಮಾರ್ ಮಾತನಾಡಿದ್ದಾರೆ. ಅವರ ವಿಧಾನ ಪರಿಷತ್‌ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶೇಹನಾಜ್ ಅಖ್ತರ್, ಬಸಮ್ಮ, ಶಿಲ್ಪಾ, ಸೈರಾ ಬಾನು, ತಹೆನಿಯತ್, ಜೇಬಾ ತಬಸ್ಸುಮ್, ಅಮೀನಾ ಪಟೇಲ್, ಶೈಖ್ ಸಮರೀನ್, ಶೈಖ್ ಫಾತೀಮಾ, ಕಮಲಾ, ರಾಜ್ ಮಾಬೀ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News