ಅಫಜಲಪುರ: ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೆಪ್ಟೆಂಬರ್ 10ರಂದು ಅಫಜಲಪುರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಹಿರಿಯ ಮುಖಂಡ ಭೀಮರಾಯ ಗೌರ ಹಾಗೂ ದಲಿತ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗದ ಉಸ್ತುವಾರಿ ಮಹಾಂತೇಶ್ ಬಳುಂಡಗಿ ಮಾಹಿತಿ ನೀಡಿದರು.

ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದವರ ವಿರುದ್ಧ ತಕ್ಷಣ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಪರ ಸಂಘಟನೆಗಳು, ಕೋಲಿ ಕಬ್ಬಲಿಗ ಹೋರಾಟ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಒತ್ತಾಯಿಸಿವೆ.

ಸುದ್ದಿಗೋಷ್ಠಿಯಲ್ಲಿ ಕಾಶೀನಾಥ್ ಟಕ್ಕಳಕಿ, ಸತೀಶ್ ಜಮಾದಾರ್, ಅಶೋಕ್ ಸಿಂಗೆ, ಮಹಾನಿಂಗ್ ಅಂಗಡಿ, ಶಿವರಾಯ ನಾಟಿಕಾರ, ಸಿದ್ದಪ್ಪ ಸಿನ್ನೂರ್, ಅನಿಲ್ ಕಳಸಿ, ನಾಗು ಘತ್ತರಗಿ, ಮಹಾಂತೇಶ್ ಬಡಿಗೇರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor