ಅರ್ಹ ಮತ್ತು ಅನರ್ಹ ಫಲಾನುಭವಿಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
Update: 2025-03-10 19:12 IST
ಕಲಬುರಗಿ: ಕಲಬುರಗಿ ಮಹಾನಗರಪಾಲಿಕೆಯ ಶೇ.24.10 ಯೋಜನೆಯಡಿ 2024-25ನೇ ಸಾಲಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪೌರಕಾರ್ಮಿಕರುಗಳ ನಿರುದ್ಯೋಗ ಮಕ್ಕಳಿಗೆ/ಪತಿ/ಪತ್ನಿಯರಿಗೆ ಸಣ್ಣ ಉದ್ದಿಮೆ ಸ್ಥಾಪಿಸಲು ಬ್ಯಾಂಕ್ ಮೂಲಕ ಸಹಾಯಧನಕ್ಕೆ ಸಂಬಂಧಿಸಿದಂತೆ ಅರ್ಹ ಮತ್ತು ಅನರ್ಹ ಫಲಾನುಭವಿಗಳ ತಾತ್ಕಾಲಿಕ ಪಟ್ಟಿಯನ್ನು ಕಲಬುರಗಿ ಮಹಾನಗರಪಾಲಿಕೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.
ಅದೇ ರೀತಿ ಕಲಬುರಗಿಯ ಮಹಾನಗರಪಾಲಿಕೆಯ http://www.kalaburagicity.mrc.gov.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ 2025ರ ಮಾರ್ಚ್ 21 ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.