ಕಲಬುರಗಿ | ಪಿಯುಸಿ ಪರೀಕ್ಷೆಗೆ ಹಾಜರಾದ ನಕಲಿ ಅಭ್ಯರ್ಥಿಯ ಬಂಧನ
Update: 2025-03-06 14:54 IST
ಕಲಬುರಗಿ: ನಗರದ ಖಾಸಗಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಬುಧವಾರ ಇಲ್ಲಿನ ಬ್ರಹ್ಮಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಂಪೂರ್ಣಾ ಪಾಟೀಲ್ ಬಂಧಿತ ಆರೋಪಿಯಾಗಿದ್ದಾರೆಂದು ತಿಳಿದುಬಂದಿದೆ.
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅರ್ಚನಾ ಬಸವರಾಜ ಕಾಂಬಳೆ ಎಂಬುವವರ ಬದಲು ಕಾನೂನು ವಿದ್ಯಾರ್ಥಿನಿ ಸಂಪೂರ್ಣಾ ಪಾಟೀಲ್ ಪಿಯುಸಿ ಪರೀಕ್ಷೆ ಬರೆಯಲು ಬಂದಿದ್ದರು ಎನ್ನಲಾಗಿದೆ.
ಸಂಘಟನೆಯೊಂದು ಕಾಲೇಜಿನಲ್ಲಿ ಅಕ್ರಮವನ್ನು ಪ್ರಶ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.