×
Ad

ರಾಯಚೂರು | ಐಪಿಎಲ್‌ ಬೆಟ್ಟಿಂಗ್‌ ನಲ್ಲಿ ಲಕ್ಷಾಂತರ ರೂ. ನಷ್ಟ : ಯುವಕ ಆತ್ಮಹತ್ಯೆ

Update: 2024-05-19 16:06 IST

ರಾಯಚೂರು : ಐಪಿಎಲ್​ ಬೆಟ್ಟಿಂಗ್‌ ದಂಧೆಯಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಎನ್ನಲಾಗಿದೆ. ಮುದಿಬಸವ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲ  ಮಾಡಿಕೊಂಡಿದ್ದು, ಸಾಲದಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಅಲ್ಲದೆ, ಈ ಸಾಲಗಾರರ ಉಪತಟಳದಿಂದ ಬೇಸತ್ತ ಮುದಿಬಸವ ಲಾಡ್ಜ್‌ ಯೊಂದರ ರೂಮಿನಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಸಿಂಧನೂರು ನಗರ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News