×
Ad

ರಾಯಚೂರು| ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

Update: 2025-12-06 19:36 IST

ರಾಯಚೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಬೌದ್ಧ ಧರ್ಮ ಗುರುಗಳಾದ ಬಂತೇಜಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧೂ ರಘು. ಹೆಚ್.ಎಸ್, ಪರಿಶಿಷ್ಟ ಕಲ್ಯಾಣ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವಮಾನಪ್ಪ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರಾದ ಶಿವಪ್ಪ, ಪರಿಶಿಷ್ಟ ಕಲ್ಯಾಣ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿಗಳಾದ ರುಕ್ಮಿಣೀ ಬಾಯಿ, ಸಮಾಜ ಕಲ್ಯಾಣ ಇಲಾಖೆಯ  ವ್ಯವಸ್ಥಾಪಕರಾದ ರವಿ ಎಂ. ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News