×
Ad

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಕಲಬುರಗಿಯಲ್ಲಿ NIA ತಂಡ ಶೋಧ

Update: 2024-03-09 15:03 IST

ಕಲಬುರಗಿ: ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳು ಬಳ್ಳಾರಿಯಿಂದ ಕಲಬುರಗಿಗೆ ಬಸ್ ನಲ್ಲಿ ಆಗಮಿಸಿರುವ ಹಿನ್ನೆಲೆಯಲ್ಲಿ NIA ತಂಡ ತೀವ್ರ ಶೋಧ ನಡೆಸಿದ್ದಾರೆ.

ಕಲಬುರಗಿ ನಗರದ ರೈಲ್ವೆ ನಿಲ್ದಾಣ ಮತ್ತು ಕೇಂದ್ರ ಬಸ್ ನಿಲ್ದಾಣದ ಸಿಸಿಟಿವಿ ಕ್ಯಾಮರಾಗಳ ದೃಶ್ಯವನ್ನು ಪರಿಶೀಲನೆ ನಡೆಸಿದ್ದು, ಬಳ್ಳಾರಿಯಿಂದ ಕಲಬುರಗಿಗೆ ಶಂಕಿತ ಪ್ರಯಾಣಿಸಿದ ಎನ್ನಲಾದ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ನನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಆರ್.ಪಿ.ಎಫ್ ಠಾಣೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದು, ಮತ್ತೊಂದು NIA ತಂಡ ಹಳೆ ಜೇವರ್ಗಿ ರಸ್ತೆಯ ಸಿಸಿಟಿವಿ ಕ್ಯಾಮೆರಾಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News