ಕಲಬುರಗಿ: ಕಲಬುರಗಿ ರಂಗಾಯಣವು ಸಿದ್ಧಪಡಿಸುವ ನಾಟಕಗಳು ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಒಂದು ವರ್ಷದ ಅವಧಿಗೆ 12 ಕಲಾವಿದರನ್ನು ನೇಮಕ ಮಾಡಿಕೊಂಡು ರೆಪರ್ಟರಿ ಪ್ರಾರಂಭಿಸಲು ಉದ್ದೇಶಿಸಿದ್ದು, ಆಸಕ್ತ ಕಲಾವಿದರಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2026ರ ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕಲಾವಿದರು ನಿಗದಿತ ನಮೂನೆಯನ್ನು ಕಲಬುರಗಿ ರಂಗಾಯಣದ ಫೇಸ್‌ಬುಕ್ ಪುಟ ಅಥವಾ www.rangayanakalaburagi.karnataka.gov.in ರಂಗಾಯಣದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಅರ್ಜಿಯನ್ನು 2026ರ ಅಕ್ಟೋಬರ್ 15ರ ಸಂಜೆ 5.30 ಗಂಟೆಯೊಳಗಾಗಿ ತಲುಪುವಂತೆ ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯ, ಸೇಡಂ–ಶಹಾಬಾದ್ ವರ್ತುಲ ರಸ್ತೆ, ಕಲಬುರಗಿ–585105 ಈ ವಿಳಾಸಕ್ಕೆ ಮುದ್ದಾಂ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಇ-ಮೇಲ್ ಮೂಲಕವೂ ಅರ್ಜಿಯನ್ನು rangayanakalaburgi@gmail.com ವಿಳಾಸಕ್ಕೆ ಕಳುಹಿಸಬಹುದು.

ಅಭ್ಯರ್ಥಿಗಳ ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor