×
Ad

ಕುಸುಬೆ ಖರೀದಿಗೆ ಶೀಘ್ರ ನೋಂದಣಿ ಆರಂಭ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

Update: 2025-03-12 19:10 IST

ಬೆಂಗಳೂರು : ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬೆ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ಮನವಿ ಮಾಡಿದ್ದಾರೆ.

ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಲ್ ಗೆ  5,940 ರೂ. ಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ ಐದು ಕ್ವಿಂಟಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರೈತರು ತಮ್ಮ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್ ನ ಎಫ್ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News