ಕಲಬುರಗಿ| ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖಂಡರಾದ ವಿಠಲ ನಾಯಕ್ ಹಾಗೂ ಬಸವರಾಜ ಪಂಚಾಳ ಅವರು ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿಜೆಪಿ ಮುಖಂಡ ವೀರಣ್ಣ ಯಾರಿ, ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ಈ ದಿನ ನಮ್ಮ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ನಮ್ಮ ಭವ್ಯಭಾರತಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ್, ಎಸ್‌ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಯಮನಪ್ಪ ಪುಜಾರಿ, ಹರಿ ಗಲಾಂಡೆ, ಅರ್ಜುನ ಕಾಳೆಕರ, ಶರಣಗೌಡ ಚಾಮನೂರ, ಕಿಶನ್ ಜಾಧವ್, ಪ್ರಕಾಶ್ ಪುಜಾರಿ, ಶಿವಶಂಕರ್ ಕಾಶೆಟ್ಟಿ, ಅಶೋಕ್ ಪವಾರ, ರಿಚರ್ಡ್ ಮಾರೆಡ್ಡಿ, ರಾಜು ಪವಾರ್, ಅಯ್ಯಣ್ಣ ದಂಡೋತಿ, ಮಲ್ಲಿಕಾರ್ಜುನ ಸಾತಖೇಡ, ಹಣಮಂತ್ ಚವ್ಹಾಣ, ಕಾಶಿನಾಥ್, ನಾಮದೇವ್ ರಾಠೊಡ್, ಮಹೇಂದ್ರ ಕುಮಾರ್ ಪುಜಾರಿ, ಪ್ರೇಮ ರಾಠೊಡ, ಸಂತೋಷ ದಹಿಹಂಡೆ, ವಿಶಾಲ ನಿಂಬರ್ಗಾ, ಯಂಕಮ್ಮ ಗೌಡಗಾಂವ, ಇಂಡಿ, ಉಮಾಭಾಯಿ ಗೌಳಿ, ಶರಣಮ್ಮ ಯಾದಗಿರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.