ಕಲಬುರಗಿ: ಎಸೆಸೆಲ್ಸಿ ಪರೀಕ್ಷೆಯಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ
ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕಲಬುರಗಿ ಜಗತ್‍ನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪ್ರತಿಭಾನ್ವಿತ (ಸಾಮಾನ್ಯ-521) ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು ಎಸೆಸೆಲ್ಸಿ 2024-25 ನೇ ಸಾಲಿನ ಪರೀಕ್ಷೆಯಲ್ಲಿ 24 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿ ಹಾಗೂ 21 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ವೇದಿಕಾ 615 ಅಂಕ (ಶೇ. 98.40) ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶೀಲವಂತಿ 613 ಅಂಕ (ಶೇ. 98.08) ರಷ್ಟು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಭೂಮಿಕಾ ಮತ್ತು ನಿವೇದಿತಾ ಇಬ್ಬರು 612 ಅಂಕ (ಶೇ. 97.92) ಪಡೆದು ಶಾಲೆಗೆ ತೃತಿಯ ಸ್ಥಾನ ಪಡೆದಿದ್ದಾರೆ.
ಈ ವಿದ್ಯಾರ್ಥಿನಿಯರ ಸಾಧನೆಗಾಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಎಂ.ಎಸ್.ಅಲ್ಲಾಬಕಾಷ್, ಕ್ರೈಸ್ ಜಿಲ್ಲಾ ಸಮನ್ವಯಾಧಿಕಾರಿ ಶ್ರೀಈರಣ್ಣ ಅರಕೇರಿ, ಪ್ರಾಂಶುಪಾಲರಾದ ರಫೀಯಾ ರುಮಾನಾ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.