ಕಮಲಾಪುರದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

Update: 2026-08-22 20:26 IST

ಕಮಲಾಪುರ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 228ನೇ ಜಯಂತ್ಯೋತ್ಸವವನ್ನು ತಾಲೂಕು ಸಮಿತಿ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.

ಜಯಂತ್ಯೋತ್ಸವದ ಅಂಗವಾಗಿ ಪಟ್ಟಣದ ಆಕೃತಿ ಕಲ್ಯಾಣ ಮಂಟಪದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭವ್ಯ ಮೆರವಣಿಗೆ ನಡೆಯಿತು. ಶೃತಿ ಬಿರಾದಾರ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಆಕೃತಿ ಕಲ್ಯಾಣ ಮಂಟಪದಿಂದ ಆರಂಭವಾದ ಮೆರವಣಿಗೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಹಾಗೂ ಬಸವೇಶ್ವರ ವೃತ್ತದ ಮಾರ್ಗವಾಗಿ ಸಾಗಿತು. ಬಳಿಕ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯವರೆಗೆ ತೆರಳಿ ಮೆರವಣಿಗೆ ಅಂತ್ಯಗೊಂಡಿತು.

ಮೆರವಣಿಗೆಯಲ್ಲಿ ಸಂಗೊಳ್ಳಿ ರಾಯಣ್ಣ ಅವರ ದೇಶಪ್ರೇಮ, ಶೌರ್ಯ ಹಾಗೂ ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸಲಾಯಿತು. ನೂರಾರು ಮಂದಿ ಭಾಗವಹಿಸಿ ಕ್ರಾಂತಿವೀರನಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗುರುರಾಜ ಎಚ್. ಮಾಟೂರ, ಅಂಬಲಗಾ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾಜೋದ್ದಿನ್ ಪಟೇಲ್, ಅರುಣ ಧಮ್ಮುರ, ಅವಿಲಾಸ, ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಆಕಾಶ ಪೂಜಾರಿ, ಪಂಡಿತ ಸಿಂಗೆ, ಪ್ರಜ್ವಲ, ಮಗದುಮ್ಮ ಖಾಜಿ, ಶರಣು ಗೌರೆ, ಭೀಮಾ ಪಟ್ನಾಯಕ, ಪ್ರವೀಣ ಘಾಟಕೆ, ಶ್ರೀಶೈಲ ಸ್ವಾಮಿ, ಶರಣು ಪೂಜಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News