ಕಲಬುರಗಿ: ಪರಿಶಿಷ್ಟ ಜಾತಿ-ಪಂಗಡ ವಿದ್ಯುತ್ ಗುತ್ತಿಗೆದಾರರ ಸಂಘದ ನಗರ ಉಪಸಮಿತಿ ರಚನೆ

Update: 2026-07-22 20:26 IST

ಕಲಬುರಗಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಕಲಬುರಗಿ ನಗರದ ಹೊಸ ಉಪಸಮಿತಿಯನ್ನು ರಚಿಸಲಾಯಿತು.

ನೂತನ ಉಪಸಮಿತಿಯ ಅಧ್ಯಕ್ಷರಾಗಿ ಸೂರ್ಯಕಾಂತ್, ಉಪಾಧ್ಯಕ್ಷರಾಗಿ ರಾಜಶೇಖರ್ ಹಾಗೂ ನಾಗಣ್ಣ ಭೀಮಳ್ಳಿ, ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್, ಜಂಟಿ ಕಾರ್ಯದರ್ಶಿಯಾಗಿ ರಾಜು ಜಾದವ್, ಖಜಾಂಚಿಯಾಗಿ ನಾಮದೇವ್ ಚವಾಣ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ಕೆ. ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜೇಸ್ಕಾಂ ಪ್ರತಿನಿಧಿ ಯಾದ್ ನಿಂಬಣ್ಣ ಬಿ. ಮಾಡ್ಯಾಳಕರ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ನಗರ ಉಪಸಮಿತಿ ಅಧ್ಯಕ್ಷ ಸೂರ್ಯಕಾಂತ್, ಸಂಘದ ಸದಸ್ಯರ ಸಮಸ್ಯೆಗಳು ಮತ್ತು ಕುಂದುಕೊರತೆಗಳಿಗೆ ತ್ವರಿತ ಸ್ಪಂದನೆ ನೀಡುವುದರೊಂದಿಗೆ, ಅವರ ಹಿತಾಸಕ್ತಿಗಳ ರಕ್ಷಣೆಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಸಂಘದ ಬಲವರ್ಧನೆಗೆ ಎಲ್ಲ ಸದಸ್ಯರ ಸಹಕಾರ ಅಗತ್ಯವಾಗಿದ್ದು, ಒಗ್ಗಟ್ಟಿನ ಮೂಲಕ ಸಂಘವನ್ನು ಮತ್ತಷ್ಟು ಸದೃಢಗೊಳಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಅಧ್ಯಕ್ಷ ಪ್ರದೀಪ್ ಕಡಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸಂಜೀವ್ ಕುಮಾರ್, ಸತೀಶಕುಮಾರ್, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಗಾಯಕ್ವಾಡ್, ಜಂಟಿ ಕಾರ್ಯದರ್ಶಿ ರಮೇಶ್ ಕೊರಳ್ಳಿ, ಖಜಾಂಚಿ ಸಚಿನ್ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರೇಮ್ ಸಿಂಗ್ ಚವಾಣ್ ಸೇರಿದಂತೆ ಜಿಲ್ಲಾ ಮತ್ತು ನಗರ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಸಂಘದ ಸಂಘಟನೆ ಬಲಪಡಿಸುವುದು, ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದು ಹಾಗೂ ವಿದ್ಯುತ್ ಗುತ್ತಿಗೆದಾರರ ವೃತ್ತಿಪರ ಹಿತಾಸಕ್ತಿಗಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಹಾಗೂ ನಗರ ಘಟಕದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News