Sedam | ಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ

Update: 2026-07-29 20:07 IST

ಸೇಡಂ: ತಾಲೂಕು ಆಡಳಿತದ ವತಿಯಿಂದ ಇಂದು ತಹಶೀಲ್ದಾರ್ ಕಚೇರಿಯಲ್ಲಿ 12ನೇ ಶತಮಾನದ ಮಹಾನ್ ಶಿವಶರಣ, ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರೀಯಾಂಕ ಧನುಶ್ರೀ ಅವರು ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಆದರ್ಶಗಳು, ಸಮಾನತೆ, ಕಾಯಕ ಹಾಗೂ ಮಾನವೀಯ ಮೌಲ್ಯಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಹಡಪದ ಸಮಾಜದ ತಾಲೂಕು ಅಧ್ಯಕ್ಷ ಅಂಬರೀಶ್ ಹಡಪದ, ತಾಲೂಕಿನ ಹಡಪದ ಸಮಾಜದ ಬಾಂಧವರು ಹಾಗೂ ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News