×
Ad

ಸೇಡಂ| ಅತಿವೃಷ್ಟಿ : ಬೆಳೆ ಹಾನಿ ಪ್ರದೇಶಗಳನ್ನು ಪರಿಶೀಲನೆ ನಡೆಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

Update: 2025-09-01 17:34 IST

ಕಲಬುರಗಿ: ಮಳೆಯಿಂದ ಬೆಳೆ ಹಾನಿಗೊಳಗಾದ ಸೇಡಂ ತಾಲೂಕಿನ ಮುಧೋಳ, ಆಡಕಿ ಗ್ರಾಮಗಳ ಹೊಲಗಳಿಗೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ತೆರಳಿ ಪರಿಶೀಲನೆ ನಡೆಸಿದರು.

ಸೋಮವಾರ ಮುಧೋಳ, ಆಡಕಿ ಗ್ರಾಮಗಳಿಗೆ ಭೇಟಿ ನೀಡಿ, ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸುತ್ತಾಡಿ, ತೊಗರಿ, ಹೆಸರು ಹಾಗೂ ಉದ್ದು ಬೆಳೆಗಳ ಸ್ಥಿತಿಯನ್ನು ಕಂಡು ಬೆಳೆ ಹಾನಿ ಪರಿಹಾರ ಒದಗಿಸುವುದಾಗಿ ರೈತರಿಗೆ ಭರವಸೆ ನೀಡಿದರು.

ಸ್ಥಳದಲ್ಲಿಯೇ ಇದ್ದ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದರು.

ಕೃಷಿ ಇಲಾಖೆಯಿಂದ ಒದಗುವ ಬೆಳೆ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ದರದಲ್ಲಿ ನೀಡುವಂತೆಯೂ ಸಹ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ವೇಳೆ ಮುಧೋಳ, ಆಡಕಿ ಗ್ರಾಮದ ಮುಖಂಡರು, ರೈತರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News