×
Ad

ಸೇಡಂ | ಫೆ.8ರಂದು ಕನ್ನಡ ಜಾನಪದ ಸಮ್ಮೇಳನ, ದಶಮಾನೋತ್ಸವ ಸಂಭ್ರಮ : ಶಿವರಾವ ಭೋವಿ

Update: 2026-02-03 20:51 IST

ಸೇಡಂ : ತಾಲೂಕು ಕನ್ನಡ ಜಾನಪದ ಪರಿಷತ್ತು ವತಿಯಿಂದ ಫೆ.8ರಂದು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ 3ನೇ ಕನ್ನಡ ಜಾನಪದ ಸಮ್ಮೇಳನ ಹಾಗೂ ದಶಮಾನೋತ್ಸವ ಸಂಭ್ರಮದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ತಾಲೂಕಾಧ್ಯಕ್ಷ ಶಿವರಾವ ಭೋವಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 7.30ಕ್ಕೆ ಕಾರ್ಯಕ್ರಮವು ಧ್ವಜಾರೋಹಣದೊಂದಿಗೆ ಚಾಲನೆ ಪಡೆಯಲಿದೆ. ಕಜಾಪ ರಾಜ್ಯಾಧ್ಯಕ್ಷರಾದ ಡಾ.ಎಸ್.ಬಾಲಾಜಿ ಅವರು ರಾಷ್ಟ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾಧ್ಯಕ್ಷ ಎಂ.ನಿ.ನಿಂಗಪ್ಪ ನಾಡ ಧ್ವಜಾರೋಹಣ, ತಾಲೂಕು ಅಧ್ಯಕ್ಷ ಶಿವರಾವ ಭೋವಿ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.

ಅಂದು ಬೆಳಗ್ಗೆ 8.30ಕ್ಕೆ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ಸರ್ಕಾರಿ ನೌಕರರ ಭವನದ ವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದ್ದು, ಕೊತ್ತಲ ಬಸವೇಶ್ವರ ದೇವಾಲದ ಸದಾಶಿವ ಮಹಾಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದು, ಪುರಸಭೆ ಮಾಜಿ ಅಧ್ಯಕ್ಷ ವೀರೇಂದ್ರ ರುದ್ನೂರ ಉದ್ಘಾಟಿಸಲಿದ್ದಾರೆ. ವೀರಣ್ಣ ಮಾದೇನೊರ್, ಬಸವರಾಜ ಮಳಗಿ, ಶೇಖಪ್ಪ ಸಜ್ಜನ ಉಪಸ್ಥಿತಿ ಇರಲಿದ್ದಾರೆ ಎಂದು ವಿವರಿಸಿದರು.

ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ತಂಡಗಳು ಪಾಲ್ಗೊಳ್ಳಲಿವೆ. ಬೆಳಿಗ್ಗೆ 10.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಜ್ಞಾನಪ್ರಕಾಶ ಮಹಾಸ್ವಾಮಿಗಳು ಹಾಗೂ  ಪಂಚಾಕ್ಷರಿ ಮಹಾಸ್ವಾಮಿಗಳು ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಸವರಾಜ ಆರ್.ಪಾಟೀಲ ಊಡಗಿ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್‌, ಎಸ್.ಬಾಲಾಜಿ, ಮುಡುಬಿ ಗುಂಡೇರಾವ, ಶಿವರಾವ ಭೋವಿ, ಡಾ. ಶರಣಪ್ಪ ಗೋನಾಳ, ಎಂ.ಬಿ.ನಿoಗಪ್ಪ, ಡಾ.ಎಚ್.ಬಿ.ಪಾಟೀಲ, ಬಿಇಒ ಮಾರುತಿ ಹುಜರಾತಿ, ಬಸವರಾಜ ಸಾಗರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕ್ಯಾಲೆಂಡರ್ ಬಿಡುಗಡೆ, ಸಮ್ಮೇಳನಾಧ್ಯಕ್ಷರ ಸನ್ಮಾನ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ದಶಮಾನೋತ್ಸವ ಗೌರವ ಸನ್ಮಾನ ಮಾಡಲಾಗುವುದು ಎಂದರು.

ಮಧ್ಯಾಹ್ನ ಮಕ್ಕಳ ಮತ್ತು ಮಹಿಳಾ ಸಂಘಗಳ ಗೋಷ್ಠಿ ನಡೆಯಲಿದ್ದು, ಸಾಹಿತಿ ಡಾ.ಜಗನ್ನಾಥ ತರನಳ್ಳಿ ಅವರು ಉಪನ್ಯಾಸ ನೀಡಲಿದ್ದಾರೆ. ಡಾ.ಶ್ರೀನಿವಾಸರೆಡ್ಡಿ ಪಾಟೀಲ ಕೋಲಕುಂದಾ, ಲಿಂಗಾರೆಡ್ಡಿ ಶೇರಿ, ಸಿದ್ದಪ್ಪ ತಳ್ಳಳ್ಳಿ, ಶೋಭಾದೇವಿ ಚಕ್ಕಿ, ಡಾ.ಚಂದ್ರಕಲಾ ಬಿದರಿ, ಶರಣಪ್ಪ ಮಹಾಗಾಂವ, ಸಿದ್ದಯ್ಯಸ್ವಾಮಿ ಆಡಕಿ, ಅವಿನಾಶ ಬೊರಂಚಿ ಆಗಮಿಸಲಿದ್ದಾರೆ ಎಂದರು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ಕಲಾವತಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕನ್ನಡ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಶಿವರಾವ ಭೋವಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಈ ಸಾಂಸ್ಕೃತಿಕ ಹಬ್ಬದಲ್ಲಿ ತಾಲ್ಲೂಕಿನ ಸಮಸ್ತ ಜನತೆ, ಸಾಹಿತ್ಯಾಸಕ್ತರು ಹಾಗೂ ಜಾನಪದ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ಕೋರಿದರು.

ಪರಿಷತ್ ಖಜಾಂಚಿ ಶಿವಯೋಗಿ ಸಕ್ಪಾಲ್, ಸಂಚಾಲಕ ಗುರುಲಿಂಗ ಕೋಡ್ಲಾ, ಜಗನ್ನಾಥ ಎಂ.ಭಾಗೋಡಿ, ಮಲ್ಲಮ್ಮ ಪತ್ರಿ, ರಾಜೇಶ್ವರಿ ಬಿಲಗುಂದಿ, ಪುಷ್ಪ ಗೊಬ್ಬೂರ, ಭವಾನಿ ಕೇಶ್ವರ ಪತ್ರಿಕಾಗೋಷ್ಠಿಯಲ್ಲಿದ್ದರು.ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮುರುಳಿಧರ ದೇಶಪಾಂಡೆ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News