ಸೇಡಂ | ಸರಕಾರಿ ಆಸ್ಪತ್ರೆ ರೋಗಿಗಳ ಯೋಗಕ್ಷೇಮ ವಿಚಾರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ : ಸೇಡಂ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲರು ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ ಮತ್ತು ಸೌಲಭ್ಯಗಳ ಕುರಿತು ಸಚಿವರು ಮಾಹಿತಿ ಪಡೆದರು.
ರೋಗಿಗಳ ಆರೋಗ್ಯದ ಸಂಪೂರ್ಣ ಆರೈಕೆ ಹಾಗೂ ಪೂರ್ಣ ಪ್ರಮಾಣದಲ್ಲಿ ಚೇತರಿಕೆಯಾಗುವ ತನಕ ವೈದ್ಯರು ಕಟ್ಟುನಿಟ್ಟಾಗಿ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.
ಈ ವೇಳೆ ಆಸ್ಪತ್ರೆ ಮೇಲ್ದರ್ಜೆಗೇರುತ್ತಿರುವ ಕುರಿತು ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶಿವಶರಣರಡ್ಡಿ ಪಾಟೀಲ್, ಕಾಂಗ್ರೆಸ್ ಮುಖಂಡರು ಬಸವರಾಜ ಪಾಟೀಲ್ ಉಡಗಿ, ಪುರಸಭೆ ಅಧ್ಯಕ್ಷ ವಿರೇಂದ್ರ ನಾಗೇಂದ್ರ ರೂದ್ನೂರ, ಹಾಜಿ ನಾಡೇಪಲ್ಲಿ, ನಾಗರಾಜ್ ಎಳ್ಳಿ, ರಂಜೋಳ ರಶೀದ್, ಅಬ್ದುಲ್ ಗಫೂರ್, ತಾಲೂಕ ಆರೋಗ್ಯ ಅಧಿಕಾರಿ ಡಾ , ಸಂಜುಕುಮಾರ ಪಾಟೀಲ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ನಾಗರಾಜ್ ಮನ್ನೆ ಸೇರಿ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.