ಸೇಡಂ | ವಿವಿಧ ಬೇಡಿಕೆ ಈಡೇರಿಕೆಗಾಗಿ ಜ.20ಕ್ಕೆ ಮೆದಕ್ ಗ್ರಾಪಂ ಮುತ್ತಿಗೆ : ಸಾಬಪ್ಪ
Update: 2026-01-18 22:33 IST
ಸೇಡಂ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.20ರಂದು ಮೆದಕ್ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಸಾಬಪ್ಪ ಹೇಳಿದ್ದಾರೆ.
ಮೆದಕ್ ಗ್ರಾಪಂ ವ್ಯಾಪ್ತಿಯ ಸಿಲಾರಕೋಟ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯ ಇಲ್ಲದೇ ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಶೌಚಾಲಯ ನಿರ್ಮಾಣಕ್ಕೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಮಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಪ್ರಕಟನೆಯಲ್ಲಿ ಆರೋಪಿಸಿದ್ದಾರೆ.