ಸೇಡಂ: ತಾಲೂಕಿನ ನೀಲಹಳ್ಳಿ ಗ್ರಾಮದ ಪಿಎಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೇಡಂ ಸರಳಾನಗರದ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ವತಿಯಿಂದ 100 ಸ್ಟೀಲ್ ಊಟದ ತಟ್ಟೆಗಳು ಹಾಗೂ 100 ಸ್ಟೀಲ್ ಲೋಟಗಳನ್ನು ವಿತರಿಸಲಾಯಿತು.

ಶಾಲೆಯ ಮೂಲಭೂತ ಸೌಕರ್ಯಗಳಿಗಾಗಿ ಈ ಹಿಂದೆ ಸಲ್ಲಿಸಿದ್ದ ಮನವಿಗೆ ತ್ವರಿತ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದ ಅಲ್ಟ್ರಾಟೆಕ್ ಸಿಮೆಂಟ್ ಸಂಸ್ಥೆ, ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳ ಶೈಕ್ಷಣಿಕ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಈ ಸಮಾಜಮುಖಿ ಕಾರ್ಯ ಕೈಗೊಂಡಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಹಾಗೂ ಪೌಷ್ಟಿಕ ರಾಗಿ ಮಾಲ್ಟ್ ಸೇವಿಸಲು ಸ್ಟೀಲ್ ತಟ್ಟೆ ಮತ್ತು ಲೋಟಗಳು ಉಪಯುಕ್ತವಾಗಲಿದ್ದು, ಮಕ್ಕಳಿಗೆ ಸ್ವಚ್ಛ ಹಾಗೂ ಸುಸಜ್ಜಿತವಾಗಿ ಆಹಾರ ಸೇವಿಸಲು ಅನುಕೂಲವಾಗಲಿದೆ ಎಂದು ಶಾಲಾ ಆಡಳಿತ ತಿಳಿಸಿದೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಮಂಜು ನರೋಣಾ, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್‌ನ ಪ್ರತಿನಿಧಿಗಳಾದ ಗೌಡಪ್ಪಗೌಡ, ನಾಗಕುಮಾರ ಎಳ್ಳಿ, ಗಣೇಶ ಕೆ. ಹಾಗೂ ಶಿಕ್ಷಣ ಪ್ರೇಮಿ ಮಂಜುನಾಥ ಸಾಹು ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor