×
Ad

ಸೇಡಂನಲ್ಲಿ ರಮಾಬಾಯಿ ಅಂಬೇಡ್ಕರ್ 128ನೇ ಜಯಂತ್ಯೋತ್ಸವ : ವಿಲಾಸ್ ಗೌತಮ

‘ಚಾಂಡಾಲಿನಿ, ರಮಾಬಾಯಿ ಅಂಬೇಡ್ಕರ್ ನಾಟಕ ಪ್ರದರ್ಶನ

Update: 2026-01-30 18:23 IST

ಸೇಡಂ : ರಮಾಬಾಯಿ ಅಂಬೇಡ್ಕರ್ ಅವರ 128ನೇ ಜಯಂತ್ಯೋತ್ಸವದ ಅಂಗವಾಗಿ ನಮೋ ಬುದ್ದಾಯ ಸೇವಾ ಚಾರಿಟೇಬಲ್ ಟ್ರಸ್ಟ್, ಸೇಡಂ, ಗಣಕರಂಗ ಧಾರವಾಡ, ಸಂಗಮ ಕಲಾ ತಂಡ ಹಾಗೂ ಸಾಂಸ್ಕೃತಿಕ ಸಂಘ ಬಾಗಲಕೊಟ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 1 ಮತ್ತು 2ರಂದು ಪಟ್ಟಣದ ಕರ್ನಾಟಕ ಸುವರ್ಣ ಭವನದಲ್ಲಿ ‘ಚಾಂಡಾಲಿನಿ’ ಹಾಗೂ ‘ರಮಾಬಾಯಿ ಅಂಬೇಡ್ಕರ್’ ನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವಿಲಾಸ್ ಗೌತಮ ತಿಳಿಸಿದರು.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.1ರಂದು ‘ಚಾಂಡಾಲಿನಿ’ ನಾಟಕ ಪ್ರದರ್ಶನ ನಡೆಯಲಿದೆ. ಈ ಸಂದರ್ಭದಲ್ಲಿ ಉರಿಲಿಂಗಪೆದ್ದೀಶ್ವರ ಕೋಡ್ಲ ಹಾಗೂ ಮೈಸೂರು ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಜ್ಞಾನಪ್ರಕಾಶ ಮಹಾಸ್ವಾಮಿಗಳು ಮತ್ತು ಹಾಲಪ್ಪಯ್ಯ ವಿರಕ್ತ ಮಠದ ಪರಮ ಪೂಜ್ಯ ಪಂಚಾಕ್ಷರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಬಸವರಾಜ ಆರ್. ಪಾಟೀಲ್ ಉಡಗಿ, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧೂಳಪ್ಪ ದೊಡ್ಡಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಶ್ವನಾಥ್ ಪಾಟೀಲ್ ಬೊಮ್ಮನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ ಎಂದರು.

ಫೆ.2ರಂದು ‘ರಮಾಬಾಯಿ ಅಂಬೇಡ್ಕರ್’ ನಾಟಕ :

ಫೆ.2ರಂದು ನಡೆಯಲಿರುವ ‘ರಮಾಬಾಯಿ ಅಂಬೇಡ್ಕರ್’ ನಾಟಕ ಪ್ರದರ್ಶನ ಸಮಾರಂಭದಲ್ಲಿ ಜದ್ಗುರು ಮರುಳ ಶಂಕರ ದೇವ ಮಠದ ಶ್ರೀ ಸಿದ್ದಬಸವ ಕಬೀರ ಮಹಾಸ್ವಾಮಿಗಳು (ಚಿಗರಹಳ್ಳಿ) ಹಾಗೂ ರಾಮಗಿರಿ ಮಠದ ಪೂಜ್ಯ ಉಮೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಉದ್ಘಾಟಿಸಲಿದ್ದು, ನಮೋ ಬುದ್ದಾಯ ಸೇವಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಸೇಡಂಕರ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ್, ಬಿಜೆಪಿ ಅಧ್ಯಕ್ಷ ಶಿವಶರಣಪ್ಪ ಶಂಕರ, ಬಿಜೆಪಿ ಮುಖಂಡರು ಶಿವಕುಮಾರ್ ಜಿ.ಕೆ. ಪಾಟೀಲ್, ಸತೀಶ್ ರೆಡ್ಡಿ ಪಾಟೀಲ್ ರಂಜೋಳ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಸೇಡಂಕರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News