ಶಹಾಬಾದ್ | ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿದವರು ಅಂಬೇಡ್ಕರ್ : ಮರಿಯಪ್ಪ ಹಳ್ಳಿ
ಶಹಾಬಾದ್ : ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು.
ಅವರು ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಆಯೋಜಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬಾಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮತ್ತು ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆಯನ್ನು ಅರಿತು ನಡೆಯಬೇಕಾಗಿದೆ ಎಂದರು.
ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಮರತೂರ ಮಾತನಾಡಿದರು.
ಗ್ರಾ.ಪಂ ಅಧ್ಯಕ್ಷೆ ಮುತ್ತಮ್ಮ ಶಿವರಾಯ ಮರತೂರ ಅಧ್ಯಕ್ಷತೆ ವಹಿಸಿದ್ದರು. ಕಾಡಾ ಅಧ್ಯಕ್ಷ ಡಾ.ಎಂ.ಎ.ರಶೀದ ಧ್ವಜಾರೋಹಣ ನೆರವೇರಿಸಿದರು. ತಹಶೀಲ್ದಾರ್ ನೀಲಪ್ರಭಾ ಬಬಲಾದ, ಅಣದೂರಿನ ಬೌದ್ಧ ವಿಹಾರದ ವರಜ್ಯೋತಿ ಭಂತೆಜೀ, ಅಲ್ಲಮಪ್ರಭು ಸಂಸ್ಥಾನದ ಡಾ.ಮಲ್ಲಣಪ್ಪ ಮಹಾಸ್ವಾಮಿಗಳು ಮಾತನಾಡಿದರು.
ಮುಖಂಡರಾದ ಬಸವರಾಜ ಬೆಣ್ಣೂರ್, ಮಲ್ಲಪ್ಪ ಹೊಸಮನಿ, ನಗರಸಭೆ ಆಯುಕ್ತ ಕೆ.ಗುರಲಿಂಗಪ್ಪ, ತಾಪಂ ಇಓ ಮಲ್ಲಿನಾಥ ರಾವೂರ, ಕೋತ್ತಲಪ್ಪ ಮುತ್ಯಾ ,ಅಜಿತ್‌ಕುಮಾರ ಪಾಟೀಲ, ಅಪ್ಪುಗೌಡ ತರನಳ್ಳಿ, ಪಿಡಿಓ ನಿಂಗಪ್ಪ ಕೆಂಭಾವಿ, ಮಲ್ಲಣ್ಣ ಮರತೂರ, ಕರವೇ ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್, ಗ್ರಾಪಂ ಸರ್ವ ಸದಸ್ಯರು ಸೇರಿದಂತೆ ಗ್ರಾಮಸ್ಥರು ಇದ್ದರು.