×
Ad

ಕಲಬುರಗಿ ಮಹಾನಗರ ಪಾಲಿಕೆಯ ವಿಪಕ್ಷ ನಾಯಕರಾಗಿ ಶೋಭಾ ದೇಸಾಯಿ ಅಧಿಕಾರ ಸ್ವೀಕಾರ

Update: 2025-08-30 21:18 IST

ಕಲಬುರಗಿ: ಇಲ್ಲಿನ ಕಲಬುರಗಿ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಕಾರ್ಪೊರೇಟರ್ ಶೋಭಾ ಗುರುರಾಜ್ ದೇಸಾಯಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಆಯುಕ್ತರಾದ ಅವಿನಾಶ್ ಶಿಂಧೆ, ನೂತನ ಮೇಯರ್ ವರ್ಷಾ ಜಾನೆ, ಉಪ ಮೇಯರ್ ತೃಪ್ತಿ ಅಲ್ಲದ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಅವರನ್ನು ಅಭಿನಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News