×
Ad

ಸುಪ್ರೀಂ ಕೋರ್ಟ್‌ನಲ್ಲಿ ಶೂ ಎಸೆದ ಘಟನೆ | ವಕೀಲನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ : ಶ್ರೀಕುಮಾರ ಕಟ್ಟಿಮನಿ

Update: 2025-10-06 20:03 IST

ಕಲಬುರಗಿ : ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿ ಅವರ ಮೇಲೆ ನಡೆದ ಈ ಘಟನೆ ಖಂಡನಿಯವಾದದ್ದು. ಮತಾಂಧ ಮನಸ್ಥಿತಿಯ ವಕೀಲ ಕಿಶೋರ ರಾಕೇಶ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಮಹಾನಾಯಕ ಜನಪರ ವೇದಿಕೆ ಕಲಬುರಗಿ ಜಿಲ್ಲಾ ಸಮಿತಿಯು ಮುಖಂಡ ಶ್ರೀಕುಮಾರ ಕಟ್ಟಿಮನಿ ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಧಮ್ಮ ಮಾರ್ಗದಲ್ಲಿ ನಡೆಯುತ್ತಿರುವ ಪ್ರಬಲ ಡಾ.ಅಂಬೇಡ್ಕರ್ ಅನುಯಾಯಿಯಾಗಿದ್ದು, ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿಸುವ ಸಂದರ್ಭದಲ್ಲಿ ನಾನು ಈ ಮಟ್ಟಕ್ಕೆ ಬೆಳೆಯಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಮೂಲಕ ಪಡೆದ ಶಿಕ್ಷಣ ಕಾರಣ ಎಂದು ಪ್ರಭಲವಾಗಿ ಪ್ರತಿಪಾದಿಸಿದ್ದರು. ಇದನ್ನು ಮನುವಾದಿ ಮನಸ್ಥಿತಿಯ ಜಾತಿವಾದಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಭಾರಿಗೆ ಕೇವಲ 6 ತಿಂಗಳ ಕಾಲ ಅಷ್ಟೇ ಸಿ ಜೆ ಐ ಆಗುತ್ತಿರುವುದಕ್ಕೆ ಮನವಾದಿಗಳು ಇಷ್ಟೊಂದು ವಿಷಕಾರುತ್ತಿರುವುದು ದುರದೃಷ್ಟಕರ. ಇದು ಸಂಪೂರ್ಣ ದೇಶದ್ರೋಹ ಕೃತ್ಯವಾಗಿದ್ದು, ಅವನಿಗೆ ಕಠಿಣ ಶಿಕ್ಷೆ ಕೊಡುವ ಮೂಲಕ ಜಾತಿವಾದಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಬೇಕು. ಮುಂದೆ ಇಂತಹ ಘಟನೆ ಮರುಕಳಿಸದಂತೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಹಾನಾಯಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ನಾಗೇಶ ಎಂ. ಕೊಳ್ಳಿ ಪ್ರಧಾನ ಕಾರ್ಯದರ್ಶಿ ಶ್ರೀಕುಮಾರ್ ಕಟ್ಟಿಮನಿ, ಜೇವರ್ಗಿ ತಾಲೂಕಾಧ್ಯಕ್ಷ ವಿಶ್ವಾರಾಧ್ಯ ಬಡಿಗೇರ್ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News