ಸಮಾಜ ಕಲ್ಯಾಣ ಇಲಾಖೆ ನೌಕರರ ಕ್ರೀಡಾಕೂಟ : ಕಲಬುರಗಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
Update: 2025-01-24 19:55 IST
ಕಲಬುರಗಿ : ಕಲಬುರಗಿ ವಿಭಾಗ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಜ.23 ಮತ್ತು 24 ರಂದು ಎರಡು ದಿನಗಳ ಕಾಲ ಕಲಬುರಗಿಯ ಪದವಿ ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಜರುಗಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಲಬುರಗಿ ಜಿಲ್ಲಾ ತಂಡ ಯಾದಗಿರಿ ತಂಡವನ್ನು ಸೋಲಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಕಲಬುರಗಿ ತಂಡದ ಸಾಧನೆಗೆ ಸಮಾಜ ಕಲ್ಯಾಣಕ್ಕೆ ಇಲಾಖೆಯ ಅಪರ ನಿರ್ದೇಶಕ ಅಲ್ಲಾಭಕ್ಷ ಅವರು ಹರ್ಷ ವ್ಯಕ್ತಪಡಿಸಿ, ರಾಜ್ಯ ಮಟ್ಟದ ಪಂದ್ಯದಲ್ಲಿಯೂ ಜಯಶಾಲಿಯಾಗಲಿ ಎಂದು ತಂಡಕ್ಕೆ ಶುಭ ಹಾರೈಸಿದ್ದಾರೆ.