ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಕಲಬುರಗಿ: ಕಲಬುರಗಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಕಲಬುರಗಿ ಕೇಂದ್ರ ಕಾರಾಗೃಹದ ಸಹಯೋಗದಲ್ಲಿ ಗುರುವಾರ ಬಂದಿಗಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು.
ಶಿಬಿರವನ್ನು ಉದ್ಘಾಟಿಸಿದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಂದ್ರಶೇಖರ ನರಬೋಳ ಅವರು, “ಕಾರಾಗೃಹದಲ್ಲಿ ಬಂದಿಗಳ ಸಂಖ್ಯೆ ಹೆಚ್ಚಿನ ಕಾರಣದಿಂದ, ಕ್ಷಯರೋಗ ಸೇರಿದಂತೆ ಹಲವು ಕಾಯಿಲೆಗಳ ತಪಾಸಣೆ ಅಗತ್ಯ. ಮುಂಚಿತ ತಪಾಸಣೆಯಿಂದ ರೋಗ ತಡೆಗಟ್ಟಲು ಸಾಧ್ಯ” ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಮುಖ್ಯಸ್ಥೆ ಡಾ. ಅನಿತಾ ಆರ್. ಅವರು, “ಬಂದಿಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಪ್ರತಿ ತಿಂಗಳು ನಿಯಮಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದರು.
ಮೊದಲ ದಿನ 80 ಕೈದಿಗಳಿಗೆ ಆರೋಗ್ಯ ತಪಾಸಣೆ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ರವೀಂದ್ರ ಬನ್ನೇರಿ, ಮೇಲ್ವಿಚಾರಕ ಮಲ್ಲಿಕಾರ್ಜುನ ಬಿರಾದಾರ, ಎಂ.ಇ.ಓ. ರಂಗನಾಥ್, ಸಂಯೋಜಕ ಸಂತೋಷ, ಲ್ಯಾಬ್ ತಜ್ಞ ಅಲ್ಲಾವುದ್ದೀನ್, ಆಡಳಿತಾಧಿಕಾರಿ ಭೀಮಾಶಂಕರ್ ಡಾಂಗೆ ಹಾಗೂ ಕಾರಾಗೃಹದ ಸಿಬ್ಬಂದಿ ಭಾಗವಹಿಸಿದರು.
ಸ್ವಾಗತ ಮತ್ತು ನಿರೂಪಣೆಯನ್ನು ಆಪ್ತ ಸಮಾಲೋಚಕಿ ಸುಗುಲಾ ರಾಣಿ ಮಾಡಿದರು. ಕೊನೆಯಲ್ಲಿ ಶಿಕ್ಷಕ ನಾಗರಾಜ ಮುಲಗೆ ವಂದಿಸಿದರು.